-->

   ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಸಾರ್ವಜನಿಕ ತಿಳುವಳಿಕೆಗಾಗಿ ಪ್ರಕಟಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಮಾತನಾಡಿದ ಅವರು, ಅಂತಿಮ ಮತದಾರರ ಪಟ್ಟಿಯಲ್ಲಿ 8,50,552 ಪುರುಷ ಮತದಾರರು, 8,87,060 ಮಹಿಳಾ ಮತದಾರರು ಹಾಗೂ 76 ತೃತೀಯ ಲಿಂಗ ಮತದಾರರು ಹೆಸರು ನಮೂದಾಗಿದೆ. ಒಟ್ಟು 17,37,688 ಮತದಾರರಿದ್ದಾರೆ. ಇವರಲ್ಲಿ 47,174 ಮತದಾರರು ಸೇರ್ಪಡೆಯಾಗಿದ್ದಾರೆ. ವಿವಿಧ ಕಾರಣಗಳಿಂದ 18,441 ಪ್ರಕರಣಗಳನ್ನು ಕೈಬಿಡಲಾಗಿದೆ. ಒಟ್ಟು 1860 ಮತಗಟ್ಟೆಗಳಿವೆ ಎಂದರು.

ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅರ್ಹತಾ ದಿನ 2023ರ ಜನವರಿ 1ರಡಿ ಮತದಾರರ ಪಟ್ಟಿ ಪರಿಷ್ಕರಿಸಲಾಗಿದೆ. ಅದನ್ನು ಇದೀಗ ಪ್ರಕಟಿಸಲಾಗಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ನೀಡಲಾಗಿದೆ. ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಸೇರ್ಪಡೆ ತಿದ್ದುಪಡಿ ಇದ್ದಲ್ಲಿ ನಿಗದಿತ ನಮೂನೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಸಲ್ಲಿಸಲಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಇತ್ಯರ್ಥ ಪಡಿಸಲಾಗುವುದು ಎಂದು ತಿಳಿಸಿದರು.

ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರ ಅಧಿಕೃತ ಜಾಲತಾಣ https://ceo.karnataka.gov.in ಹಾಗೂ  ಜಿಲ್ಲಾ ವೆಬ್ ಸೈಟ್ do.nic.in ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವುದನ್ನು ಪರಿಶೀಲನೆ ಮಾಡಬಹುದು. ಸರಿಯಾದ ಹೆಸರನ್ನು ನಮೂದುಗಳೊಂದಿಗೆ ನೋಂದಾಯಿಸಿದ ಬಗ್ಗೆ ಖಚಿತಪಡಿಸಿಕೊಳ್ಳಬಹುದು ಎಂದು ರವಿಕುಮಾರ್ ಎಂ.ಆರ್. ಮಾಹಿತಿ ನೀಡಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99