ಕಲಬುರಗಿ: 'ಮೋದಿ ಇಂದು ರಾಜ್ಯಕ್ಕೆ ಆಗಮನ' 10,800 ಕೋಟಿ ಮೊತ್ತದ ಯೋಜನೆಗೆಳಿಗೆ ಶಂಕುಸ್ಥಾಪನೆ!
Thursday, January 19, 2023
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಇವತ್ತು ಕಲಬುರಗಿ ಹಾಗೂ ಯಾದಗಿರಿಗೆ ಭೇಟಿ ನೀಡಲಿದ್ದು, 10,800 ಕೋಟಿ ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿದ ನಂತರ ಪ್ರಧಾನಿ ನಮೋ ಈಗ ಕಲಬುರಗಿ, ಯಾದಗಿರಿಗೆ 10,800 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲು ಬರುತ್ತಿದ್ದಾರೆ.
ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳ ಸುಮಾರು 5.40ಲಕ್ಷ ಹೆಕ್ಟೇರ್‌ಗೆ ನೀರು ಸರಬರಾಜು ಮಾಡುವ 4,700ಕೋಟಿ ಮೊತ್ತದ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಕಾಮಗಾರಿಗಳಿಗೆ ಚಾಲನೆ ಹಾಗೂ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.