-->

ಮಂಗಳೂರು : ತುಳು 2ನೇ ಅಧಿಕೃತ ರಾಜ್ಯ ಭಾಷೆಯಾಗಿ ಘೋಷಣೆ ಮಾಡಲು ತಜ್ಞರ ಸಮಿತಿ ರಚನೆ

ಮಂಗಳೂರು : ತುಳು 2ನೇ ಅಧಿಕೃತ ರಾಜ್ಯ ಭಾಷೆಯಾಗಿ ಘೋಷಣೆ ಮಾಡಲು ತಜ್ಞರ ಸಮಿತಿ ರಚನೆ

ಮಂಗಳೂರು : ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆಯಾಗಿ ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ನೀಡುವಂತೆ ಡಾ.ಮೋಹನ್ ಆಳ್ವ ನೇತೃತ್ವದ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಡಾ. ಕೇಶವ ಬಂಗೇರಾ, ಡಾ.ಮಾಧವ ಕೊಣಾಜೆ,
ಗಣೇಶ್ ಅಮೀನ್ ಸಂಕಮಾರ್, ಪೃಥ್ವಿರಾಜ್ ಕವತ್ತಾರು ಮಣಿಪಾಲ, ವಸಂತ್ ಶೆಟ್ಟಿ ಉಡುಪಿ, ಚಂದ್ರಹಾಸ ಕಣಂತೂರು, ಸಂಧ್ಯಾ ಆಳ್ವಾ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರನ್ನು ಈ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹಲವಾರು ಸಂಘ-ಸಂಸ್ಥೆಗಳು, ಸಾರ್ವಜನಿಕರಿಂದ ಸರ್ಕಾರಕ್ಕೆ ಮನವಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಾಲಿ ಇರುವ ನಿಯಮಗಳು ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಈ ಕುರಿತು ಸಾಧಕ - ಬಾಧಕಗಳ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಿ ವಾಸ್ತವಾಂಶದ ವರದಿಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜ್ಯ ಸರ್ಕಾರ ನಿರ್ದೇಶನ ಮಾಡಿತ್ತು.

ಅದರಂತೆ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಒಂದು ವಾರದಲ್ಲಿ ವರದಿ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ್ ಆದೇಶಿಸಿದ್ದಾರೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಟ್ವಿಟ್ ಕೂಡಾ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99