ಕಾಪು: ಕಟಪಾಡಿ ಕೊರಗಜ್ಜ ಕ್ಷೇತ್ರಕ್ಕೆ ಜೊತೆ ಜೊತೆಯಲಿ' ಖ್ಯಾತಿಯ ಮೇಘ ಶೆಟ್ಟಿ ಭೇಟಿ
Monday, January 30, 2023
ಕಾಪು: ಕರಾವಳಿಯ ಅತ್ಯಂತ ನಂಬಿಕೆಯ ದೈವ ಕೊರಗಜ್ಜ. ಸಿನಿಮಾ, ಕಿರುತೆರೆಯ ನಟ- ನಟಿಯರು, ಉದ್ಯಮಿಗಳು, ರಾಜಕೀಯ ಮುಖಂಡರು ಶ್ರೀ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.
ಈಗ ಜೊತೆ ಜೊತೆಯಲಿ" ಧಾರಾವಾಹಿ ಖ್ಯಾತಿಯ ನಾಯಕಿ ನಟಿ ಮೇಘ ಶೆಟ್ಟಿ ಉಡುಪಿ ಜಿಲ್ಲೆಯ ಕಟಪಾಡಿ ಶ್ರೀ ಭಗವಾನ್ ಬಬ್ಬು ಸ್ವಾಮಿ ಮತ್ತು ಕೊರಗಜ್ಜ ಕ್ಷೇತ್ರ ಪೇಟೆಬೆಟ್ಟು ಇಲ್ಲಿಗೆ ಭೇಟಿ ನೀಡಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಂಡರು.
ಕಟಪಾಡಿ ಪೇಟೆಬೆಟ್ಟು ದೈವಸ್ಥಾನದಲ್ಲಿ ಕಾರ್ಣಿಕ ಮೆರೆದ ಶ್ರೀ ಕೊರಗಜ್ಜ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಇಲ್ಲಿಯ ಕಾರ್ಣಿಕದ ಬಗ್ಗೆ ಕೇಳಿ ತಿಳಿದಿದ್ದೇನೆ. ಹಾಗಾಗಿ ಇಲ್ಲಿಗೆ ಭೇಟಿ ನೀಡಿ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ಮೇಘ ಶೆಟ್ಟಿ ಮಾಧ್ಯಮಕ್ಕೆ ತಿಳಿಸಿದರು.
ಈ ವೇಳೆ ಭಗವಾನ್ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಅಧ್ಯಕ್ಷರಾದ ಹರಿಶ್ಚಂದ್ರ ಪಿಲಾರ್ ಮತ್ತಿತರರು ಉಪಸ್ಥಿತರಿದ್ದರು.