
ಕಾರ್ಕಳ: ಬೈಲೂರಿನಲ್ಲಿಂದು ಪರಶುರಾಮ ಪ್ರತಿಮೆ ಅನಾವರಣ ಮಾಡಲಿರುವ ಸಿಎಂ
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಉಮಿಕ್ಕಳ ಬೆಟ್ಟವು ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಕಂಚಿನ ಪ್ರತಿಮೆ ಲೋಕಾರ್ಪಣೆಗೆ ಸಜ್ಜಾಗಿದೆ. ಶುಕ್ರವಾರ ( ಜನವರಿ 27) ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ, ಆನಂದ್ ಸಿಂಗ್, ಕೋಟ ಶ್ರೀನಿವಾಸ ಪೂಜಾರಿ, ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ. ರಾಘವೇಂದ್ರ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.