
ಟೀಂ ಇಂಡಿಯಾಕ್ಕೆ ಬಿಗ್ ಶಾಕ್..!
ನ್ಯೂಜಿಲೆಂಡ್ ವಿರುದ್ಧದ ಟಿ20 ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆಘಾತ ಅನುಭವಿಸಿದೆ. ತಂಡದ ಓಪನರ್ ಋತುರಾಜ್ ಗಾಯಕ್ವಾಡ್ ಮೂರು ಪಂದ್ಯಗಳ ಸರಣಿಯಿಂದ ಹೊರಬಿದ್ದಿದ್ದಾರೆ.
ರಣಜಿ ಟ್ರೋಫಿಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಅವರು, ಮಣಿಕಟ್ಟಿನ ಗಾಯಕ್ಕೆ ತುತ್ತಾಗಿದ್ದಾರೆ. ಸದ್ಯ ಬೆಂಗಳೂರಿನ ಎನ್‌ಸಿಎನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಶ್ರೀಲಂಕ್ ವಿರುದ್ಧದ ಟಿ20 ಸರಣಿಯ ವೇಳೆಯು ಅವರು, ಮಣಿಕಟ್ಟಿನ ಗಾಯದಿಂದ ತಂಡದಿಂದ ಹೊರ ಉಳಿದಿದ್ದರು.