ಪ್ರೀತಿ ನಿರಾಕರಿಸಿದ್ದಕ್ಕೆ ಹೀಗೆ ಮಾಡೋದ? ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಚುಚ್ಚಿ ಚುಚ್ಚಿ ಕೊಂದ ಯುವಕ!
Monday, January 2, 2023
ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೀತಿಸಿದ ಹುಡುಗಿಯನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆ ಪ್ರೆಸಿಡೆನ್ಸಿ ಯೂನಿವರ್ಸಿಟಿ ಕಾಲೇಜಿನಲ್ಲಿ ನಡೆದಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಯಸ್ಮಿತಾ ಸಾವನ್ನಪ್ಪಿದವರು.
ಮೃತ ಲಯಸ್ಮಿತಾ ರಾಜಾನುಕುಂಟೆ ಇಟ್ಗಲ್ಪೂರ್ ಪ್ರೆಸಿಡೆನ್ಸಿ ಯೂನಿವರ್ಸಿಟಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಳು. ಲಯಸ್ಮಿತಾಳು ಪ್ರೀತಿ ನಿರಾಕರಿಸಿದ್ದಕ್ಕೆ ಕೋಪಗೊಂಡು ಪವನ್ ಕಲ್ಯಾಣ್ ಎಂಬಾತ ಏಕಾಏಕಿ ಕಾಲೇಜಿಗೆ ನುಗ್ಗಿ ಆಕೆಯ ಕತ್ತಿಗೆ ಚಾಕು ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ತಾನು ಕೂಡ ಚೂರಿಯಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.