ನಾರಾಯಣಗುರು ನಿಗಮ ರಚನೆಗೆ ಮುಖ್ಯಮಂತ್ರಿ ಒಲವು
Thursday, January 5, 2023
ರಾಜ್ಯದ ಬಿಲ್ಲವ ಈಡಿಗ ನಾಮದಾರಿಗಳು ಸೇರಿದಂತೆ 26 ಉಪಪಂಗಡಗಳ ಬಹುಸಮಯದ ಬೇಡಿಕೆಯಾಗಿರುವ ಪ್ರತ್ಯೇಕ ನಾರಾಯಣಗುರು ಅಭಿವೃದ್ಧಿ ನಿಗಮ ರಚನಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಲವು ವ್ಯಕ್ತಪಡಿಸದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಶಾಸಕರಾದ ಉಮಾನಾಥ್ ಕೋಟ್ಯಾನ್, ಸಹಿತ ಸಮುದಾಯದ ಜನಪ್ರತಿನಿಧಿಗಳು ನಿಗಮ ಸ್ಥಾಪನೆಗೆ ಬೇಡಿಕೆ ಮಂಡಿಸಿದ್ದರು. ಈ ಹಿಂದೆ ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶ ಸ್ಥಾಪಿಸಿ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಉನ್ನತಿಗಾಗಿ ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಪ್ರಕಟಿಸಿದ್ದರು. ಆದರೆ ಸಮುದಾಯದಲ್ಲಿ ಈ ಬಗ್ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಲ್ಲವ ಈಡಿಗ ಜನಪ್ರತಿನಿಧಿಗಳ ಮರುಒತ್ತಾಯದ ಮೇರೆಗೆ ನಾರಾಯಣಗುರು ಅಭಿವೃದ್ದಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಆಸಕ್ತಿ ತೋರಿಸಿದ್ದಾರೆ. ಮುಂದಿನ ಆಯವ್ಯಯದಲ್ಲಿ ಸೂಕ್ತ ಅನುದಾನ ನೀಡುವುದಾಗಿ ಅವರು ತಿಳಿಸಿದ್ದಾರೆ.