-->

   ಭ್ರಷ್ಟಚಾರ ಮುಕ್ತ ಆಡಳಿತಕ್ಕಾಗಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತನ್ನಿ- ಅಭಯಚಂದ್ರ

ಭ್ರಷ್ಟಚಾರ ಮುಕ್ತ ಆಡಳಿತಕ್ಕಾಗಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತನ್ನಿ- ಅಭಯಚಂದ್ರ

ಮೂಡುಬಿದಿರೆ: ರಾಜ್ಯದಲ್ಲಿ ಭ್ರಷ್ಟಚಾರ ಮಿತಿಮೀರಿದ್ದು, ಭ್ರಷ್ಟಚಾರ ಮುಕ್ತ ಆಡಳಿತಕ್ಕಾಗಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಬೇಕು. ಪರ್ಸಂಟೇಜ್ ಸರಕಾರ ತೊಲಗಬೇಕೆಂದುಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಬಲಾಢ್ಯ ನಾಯಕರುಗಳು ಜನವರಿ 22 ರಂದು ಮಂಗಳೂರಿಗೆ ಆಗಮಿಸಲಿದ್ದು ಈ ನಿಟ್ಟಿನಲ್ಲಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಶನಿವಾರ ಸಮಾಜ ಮಂದಿರದಲ್ಲಿ ನಡೆದ ಕಾಂಗೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. 
ರಾಜ್ಯದಲ್ಲಿ ಭ್ರಷ್ಟಚಾರ ವ್ಯಾಪಿಸಿದಂತೆ ಮೂಡುಬಿದಿರೆಯಲ್ಲಿಯೂ ಅಭಿವೃದ್ಧಿಯ ಹೆಸರಿನಲ್ಲಿ ಭ್ರಷ್ಟಚಾರ ತಾಂಡವಾಡುತ್ತಿದೆ. ಶಾಸಕರು ರಸ್ತೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವುದಕ್ಕಿಂತ ಸರ್ಕಾರಿ ಕಛೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಚಾರವನ್ನು ನಿಯಂತ್ರಿಸಲಿ. ಮೂಡುಬಿದಿರೆ ಕ್ಷೇತ್ರವು ಭ್ರಷ್ಟಚಾರ ಮುಕ್ತವಾಗಬೇಕಾದರೆ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಕಾಂಗ್ರೆಸ್ ನಾಯಕರು ಒಗಟ್ಟು ಪ್ರದರ್ಶಿಸಬೇಕೆಂಬ ಆಶಯ ಕಾಂಗ್ರೆಸ್ ಕಾರ್ಯಕರ್ತರಲ್ಲಿದೆ. ಪ್ರಜಾ ಧ್ವನಿ ಕಾರ್ಯಕ್ರಮದ ಮೂಲಕ ರಾಜ್ಯ ನಾಯಕರು ರಾಜ್ಯ ಪ್ರವಾಸ ನಡೆಸುತ್ತಿದ್ದು, ಕಾರ್ಯಕರ್ತರಿಗೆ ಧೈರ್ಯ, ಹುಮ್ಮಸ್ಸು ತುಂಬುತ್ತಿದ್ದಾರೆ. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಕಾರ್ಯಕರ್ತರು ಈಗಿಂದಲೇ ಕಾರ್ಯೋನ್ಮುಖರಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಬೇಕೆಂದು ಕರೆ ನೀಡಿದ ಅವರು ದೇಶದಲ್ಲಿ ಏಳೆಂಟು ರಾಜ್ಯಗಳಲ್ಲಿ ಮಾತ್ರ ಬಿಜೆಪಿ ಅಧಿಕಾರದಲ್ಲಿದೆ. ಉಳಿದೆಡೆಗಳಲ್ಲಿ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳಿಂದ ಖರೀದಿಸಿದ ಶಾಸಕರಿಂದ ಅಧಿಕಾರ ನಡೆಸುತ್ತಿದೆ. ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದಿಂದ ಪ್ರಜಾ ಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದೆ. ಭ್ರಷ್ಟಚಾರದ ವಿರುದ್ಧ ಹೋರಾಡುವವರನ್ನು ದೇಶದ್ರೋಹಿಗಳೆಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99