ನಟಿ ಡಿಂಪಲ್ ಕ್ವಿನ್ ವಿರುದ್ಧ ದೂರು ದಾಖಲು
Saturday, January 21, 2023
ಸಂವಿಧಾನಕ್ಕೆ ಮತ್ತು ಗಣರಾಜ್ಯೋತ್ಸವಕ್ಕೆ ನಟಿ ರಚಿತಾ ರಾಮ್ ಅವಮಾನ ಮಾಡಿದ್ದಾರೆ ಎನ್ನಲಾಗಿದ್ದು ಸದ್ಯ ಅವರ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಚಾಲೆಂಚಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಹಾಗೂ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ 'ಕ್ರಾಂತಿ' ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ.
ನಟಿ ರಚಿತಾ ರಾಮ್ ಅವರು ನೀಡಿರುವ ಹೇಳಿಕೆಯೊಂದು ತೀವ್ರ ವಿವಾದ ಸೃಷ್ಟಿಸಿದೆ.
“ಇಷ್ಟು ವರ್ಷ ಜನವರಿ 26 ಅಂದರೆ ಗಣರಾಜ್ಯೋತ್ಸವ. ಆದರೆ ಈ ವರ್ಷ ಗಣರಾಜ್ಯೋತ್ಸವ ಮರೆತುಬಿಡಿ. ಕ್ರಾಂತಿಯ ಉತ್ಸವ ಆಚರಿಸಿ ಅಷ್ಟೇ ” ಎಂದು ನಟಿ ರಚಿತಾ ರಾಮ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೆಟ್ಟಿಗರು ರಚಿತಾ ರಾಮ್ ವಿರುದ್ಧ ಹರಿಹಾಯ್ದಿದ್ದಾರೆ. ಟ್ರೋಲ್
ಈ ಹೇಳಿಕೆಗೆ ಸಂಬಂಧಿಸಿದಂತೆ ರಚಿತಾರಾಮ್ ವಿರುದ್ಧ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ದೂರು ನೀಡಲಾಗಿದೆ. ನಟಿ ರಚಿತಾ ರಾಮ್ ಭಾರತ ಸಂವಿಧಾನಕ್ಕೆ ಹಾಗೂ ಗಣರಾಜ್ಯೋತ್ಸವಕ್ಕೆ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಲಿಂಗಯ್ಯ ಒತ್ತಾಯ ಮಾಡಿದ್ದಾರೆ.