-->

Sandalwood ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ- ಶಂಕರನಾಗ್, ಅನಂತ್ ನಾಗ್ ಅವರ ಕಾರಣದಿಂದ ಕನ್ನಡ ಚಿತ್ರರಂಗಕ್ಕೆ ಬಂದಿದ್ದರು!

Sandalwood ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ- ಶಂಕರನಾಗ್, ಅನಂತ್ ನಾಗ್ ಅವರ ಕಾರಣದಿಂದ ಕನ್ನಡ ಚಿತ್ರರಂಗಕ್ಕೆ ಬಂದಿದ್ದರು!

ಬೆಂಗಳೂರು: ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಅವರು  ನಿಧನರಾಗಿದ್ದಾರೆ.

73 ವರ್ಷದ ಮಂದೀಪ್ ರಾಯ್ ಅವರಿಗೆ ಮಧ್ಯರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು.

ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಮಂದೀಪ್ ರಾಯ್ ಅವರು ಮೂಲತಃ ಮಹಾರಾಷ್ಟ್ರ ದವರು. ಬಾಲ್ಯದಲ್ಲಿ ಕರಾಟೆ, ಕುಂಗ್ ಫು ಅಭ್ಯಾಸ ಮಾಡಿದ್ದ ಮಂದೀಪ್ ಅವರು 9ನೇ ವಯಸ್ಸಿನಲ್ಲಿ ರಂಗಭೂಮಿ ಒಲವು ಮೂಡಿಸಿಕೊಂಡರು. 

ರಂಗಭೂಮಿಯಲ್ಲಿ ಪರಿಚಯವಾದ ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಕಾರಣದಿಂದ ಮಂದೀಪ್ ರಾಯ್ ಕನ್ನಡ ಚಿತ್ರರಂಗಕ್ಕೆ ಆಗಮಿಸಿದರು.


ಕಂಪ್ಯೂಟರ್‌ ಸೈನ್ಸ್‌, ಆಟೋಮೊಬೈಲ್ಸ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದ ಮಂದೀಪ್ ರಾಯ್ ಅವರು ನಂತರ ಐಬಿಎಂ ಹಾಗೂ ಟಿಸಿಎಸ್‌ ಕಂಪನಿಗಳಲ್ಲಿ ಕೆಲಸವನ್ನು ಮಾಡಿದ್ದರು.


 ಈ ವೇಳೆ ಶಂಕರ್ ನಾಗ್ ಅವರ ನಿರ್ದೇಶನದ ‘ಮಿಂಚಿನ ಓಟ’ ಚಿತ್ರದಲ್ಲಿ ಮಂದೀಪ್ ಮೊದಲ ಬಾರಿಗೆ ಬಣ್ಣ ಹಚ್ಚಿದ್ದರು. ಕನ್ನಡ ಭಾಷೆ ಬಾರದ ಮಂದೀಪ್ ರಾಯ್ ‘ಮಿಂಚಿನ ಓಟ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದರು.

ಬಳಿಕ ಮಂದೀಪ್ ರಾಯ್ ಅವರು, ದೇವರ ಆಟ, ಬಾಡದ ಹೂ, ನನ್ನವರು, ಅಮಾನುಷ, ಅಂತಿಮ ಘಟ್ಟ, ಏಳು ಸುತ್ತಿನ ಕೋಟೆ, ಆಕಸ್ಮಿಕ, ಅಗ್ನಿ ಐಪಿಎಸ್, ಅಯ್ಯ, ಹಢವಾದಿ, ಸಿಕ್ಸರ್, ಆಪ್ತರಕ್ಷಕ, ಅಲೆಮಾರಿ, ಪರಾರಿ, ಪುಷ್ಪಕ ವಿಮಾನ, ರಾಜಕುಮಾರ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99