UDUPI ; ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ : ಗಂಭೀರ ಗಾಯ
Monday, January 23, 2023
ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ ಹೊಡೆದು, ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂಡೂರಿನಲ್ಲಿ ನಡೆದಿದೆ. ಮೊಹಮ್ಮದ್ ವಾಹಿದ್ ಗಾಯಗೊಂಡ ಬಾಲಕ.
6ನೇ ತರಗತಿ ಓದುತ್ತಿರುವ ಮೊಹಮದ್ ವಾಹಿದ್ ರಸ್ತೆ ದಾಟುತ್ತಿದ್ದಂತೆ ವೇಗವಾಗಿ ಬಂದು ಬೈಕ್ ಡಿಕ್ಕಿ ಹೊಡೆದು, ಬಾಲಕ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾನೆ.
ಕೂಡಲೇ ಗಾಯಗೊಂಡ ವಾಹಿದ್ ನನ್ನು ಮಣಿಪಾಲ ಆಸ್ಪತ್ರೆ ಕರೆದೊಯ್ಯಲಾಗಿದ್ದು, ಅಲ್ಲಿಂದ ಏನೆಪೊಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.