UDUPI : ಕಾರ್ಕಳದಿಂದಲೇ ಮುತಾಲಿಕ್ ಸ್ಪರ್ಧೆ ಮುತಾಲಿಕ್ ಅಧಿಕೃತ ಘೋಷಣೆ..!
Monday, January 23, 2023
ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಕೆಲ ತಿಂಗಳ ಹಿಂದಿನಿಂದಲೂ ಸುದ್ದಿಯಲ್ಲಿದ್ದರೂ, ಅದಯ ಅಧಿಕೃತ ಆಗಿರಲಿಲ್ಲ. ಸದ್ಯ ಕಾರ್ಕಳದಲ್ಲೇ ಸುದ್ದಿಗೋಷ್ಠಿ ನಡೆಸಿದ ಪ್ರಮೋದ್ ಮುತಾಲಿಕ್ "ನಾನು ಕಾರ್ಕಳದಿಂದಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ" ಎನ್ನುವ ಅಧಿಕೃತ ಘೋಷಣೆ ಮಾಡಿದ್ದಾರೆ.
ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧನಿಯಾಗಿ ಈ ಘೋಷಣೆ ಮಾಡಿದ್ದೇನೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಏಳೆಂಟು ಬಾರಿ ಕ್ಷೇತ್ರವನ್ನು ಸುತ್ತಾಡಿದ್ದೇನೆ ಜನ ಬೆಂಬಲಿಸಿದ್ದಾರೆ.
ಹಿಂದೂಗಳಿಗೆ ನೋವಾಗಿದೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹಿಂದುತ್ವ ಭ್ರಷ್ಟಾಚಾರ ವಿರುದ್ಧ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿ - ಬಿಜೆಪಿ ಸಿದ್ಧಾಂತದ ವಿರೋಧಿ ಅಲ್ಲ. ಬಿಜೆಪಿಯೊಳಗಿನ ಕೆಲ ವ್ಯಕ್ತಿಗಳು ತತ್ವ ಸಿದ್ಧಾಂತ ವಿರುದ್ಧ ನನ್ನ ಹೋರಾಟಮ ಬಿಜೆಪಿ ಅಂದು ಮಾಡಿದ ಅವಮಾನ ಎಂದಿಗೂ ಮರೆಯೋದಿಲ್ಲ. ಹಿಂದುತ್ವ ಪ್ರಾಮಾಣಿಕತೆ ಇದ್ದರೆ ನನಗೆ ಬಿಜೆಪಿ ಕಾರ್ಕಳದಲ್ಲಿ ಬೆಂಬಲ ಕೊಡಬೇಕು ಅಂತ ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.