UDUPI : ಕುಡುಕ ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಪ್ರಯಾಣಿಕರು
Thursday, January 5, 2023
ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಬಸ್ ಚಾಲಕನನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡ ಘಟನೆ ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟಿದ್ದ ಆನಂದ್ ಟ್ರಾವೆಲ್ಸ್ ಬಸ್‌ನಲ್ಲಿ ನಡೆಯದೆ. ನಿನ್ನೆ ರಾತ್ರಿ ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟಿದ್ದ ಆನಂದ್ ಟ್ರಾವೆಲ್ಸ್ ಬಸ್ಸಿನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ರಸ್ತೆಯುದ್ದಗಲಕ್ಕೂ ಬಸ್ ಚಲಾಯಿಸುತ್ತಿದ್ದ ಬಸ್ ಚಾಲಕ, ಗಮನಿಸಿದ ಪ್ರಯಾಣಿಕರು, ಬಸ್ ಚಾಲಕ ಮತ್ತು ನಿರ್ವಾಹಕ ಇಬ್ಬರೂ ಪಾನಮತ್ತರಾಗಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಹಿನ್ನಲೆಯಲ್ಲಿ ಬಸ್ ನಿಲ್ಲಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವೇಳೆ ಬಸ್ ಹಾಳಾದ ಹಿನ್ನಲೆಯಲ್ಲಿ ಹೀಗೆ ಬಸ್ ಚಲಾಯಿಸುತ್ತಿರುವುದಾಗಿ ಚಾಲಕ ವಾದ ಮಾಡಿದ್ದಾನೆ.
ತಕ್ಷಣ ಹಾಸನ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ ಪ್ರಯಾಣಿಕರು, ಆನಂದ್ ಟ್ರಾವೆಲ್ಸ್ ನವರ ಬೇಜವಾಬ್ದಾರಿ ತನಕ್ಕೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಘಟನೆ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.