UDUPI ; ದೈವ ನೇಮದ ವಿಚಾರದಲ್ಲಿ ಕೋರ್ಟ್ ಮೊರೆ ಹೋದ ವ್ಯಕ್ತಿ ಸಾವು : ಇದು ರಿಯಲ್ ಕಾಂತಾರ..?
Saturday, January 7, 2023
ಕಾಂತಾರ ಕತೆಯನ್ನು ಹೋಲುವ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿಯ ಪಡುಹಿತ್ಲು ಜಾರಂದಾಯ ದೈವಸ್ಥಾನದಲ್ಲಿ
ಸಂಭವಿಸಿದೆ. 500 ವರ್ಷ ಇತಿಹಾಸ ಇರುವ ಈ ದೈವಸ್ಥಾನದ ವಿರುದ್ಧ ಇದೇ ಮೊದಲ ಬಾರಿ ವ್ಯಕ್ತಿಯೊಬ್ಬ ಕೋರ್ಟ್ ಮೆಟ್ಟಿಲೇರಿದ್ದ. ಈ ದೈವಸ್ಥಾನ ನೋಡಿಕೊಳ್ಳಲು ಪಡುಹಿತ್ಲು ಜಾರಂದಾಯ ಬಂಟ ಸೇವಾ ಸಮಿತಿ ಇದೆ.ಈ ಸಮಿತಿಯಲ್ಲಿ ಪ್ರಕಾಶ್ ಶೆಟ್ಟಿ ಅಧ್ಯಕ್ಷರಾಗಿದ್ದರು. ಸಮಿತಿ ಬದಲಾದಾಗ ಪ್ರಕಾಶ್ ಶೆಟ್ಟಿ ಸಹಜವಾಗಿ ಅಧಿಕಾರ ಕಳೆದುಕೊಂಡಿದ್ದಾರೆ. ನಂತರ ಪ್ರತ್ಯೇಕ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ , ಇಲ್ಲಿಯ ಸಾನದ ಮನೆಯ ಗುರಿಕಾರರಾದ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ.
ಈ ನಡುವೆ, ವರ್ಷಂಪ್ರತಿಯಂತೆ ಈ ವರ್ಷ ನೇಮೋತ್ಸವ ನಡೆಸಲು ಜಾರಂದಾಯ ದೈವಸ್ಥಾನ ಸಮಿತಿ ತೀರ್ಮಾನಿಸಿ ,ಜನವರಿ 7 ರಂದು ಕೋಲ ನಡೆಸಲು ತೀರ್ಮಾನಿಸುತ್ತದೆ. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಜಯಪೂಜಾರಿ ಮತ್ತು ಪ್ರಕಾಶ್ ಶೆಟ್ಟಿ ಕೋಲಕ್ಕೆ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗ್ತಾರೆ. ಆಶ್ಚರ್ಯದ ಸಂಗತಿ ಎಂದರೆ ಡಿಸೆಂಬರ್ 23 ಕ್ಕೆ ತಡೆಯಾಜ್ಞೆ ತಂದ ಜಯಪೂಜಾರಿ, ಡಿಸೆಂಬರ್ 24 ರಂದು ಸಮೀಪದಲ್ಲಿ ನಡೆಯುತ್ತಿದ್ದ ತಂಬಿಲ ಸೇವೆ ಸಂದರ್ಭ ಎಲ್ಲರೆದುರೇ ಸಾವನ್ನಪ್ಪಿದ್ದು ಊರ ಜನ ಮೂಕವಿಸ್ಮಿತರಾಗಿ ನೋಡುತ್ತಾರೆ. ಸದ್ಯ ಈ ಸುದ್ದಿ ಕರವಾಳಿಯಲ್ಲಿ ಬಾರೀ ಸದ್ದು ಮಾಡಿದೆ.