'ವೀರ ಕಂಬಳ' ಸಿನಿಮಾಗಾಗಿ ಬಣ್ಣ ಹಚ್ಚಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
Monday, January 2, 2023
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ವೀರ ಕಂಬಳ' ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಬಣ್ಣ ಹಚ್ಚುತ್ತಿದ್ದಾರೆ.
ಈ ಸಿನಿಮಾದಲ್ಲಿ ಅತಿಥಿ ಪಾತ್ರಕ್ಕೆ ಧರ್ಮಾಧಿಕಾರಿಗಳು ಬಣ್ಣ ಹಚ್ಚಿದ್ದಾರೆ. ಇನ್ನು ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿದ್ದು ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಚಿತ್ರದ ಕಥೆ ಹೆಣೆಯಲಾಗಿದೆ. ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಒಂದು ಪಾತ್ರ ಮಾಡಿದ್ದಾರೆ. ಪ್ರಕಾಶ್ ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ.