-->

 ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 11 ಮಂದಿ ದಾರುಣ ಸಾವು- 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 11 ಮಂದಿ ದಾರುಣ ಸಾವು- 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಭಟಪಾರಾ (ಛತ್ತೀಸ್‌ಗಢ: ಲಾರಿ ಮತ್ತು ಪಿಕ್ ಅಪ್ ಸರಕು ವಾಹನದ ನಡುವೆ ಡಿಕ್ಕಿ ಸಂಭವಿಸಿ 4 ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿದ ಹಾಗೂ 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡ ದಾರುಣ ಘಟನೆ ಛತ್ತೀಸ್‌ಗಢದ ಭಟಪಾರಾದ ಖಮಾರಿಯಾ ಗ್ರಾಮದಲ್ಲಿ ನಡೆದಿದೆ.

ಪಿಕಪ್ ವಾಹನದಲ್ಲಿದ್ದ ಎಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಖಿಲೋರಾ ಗ್ರಾಮದಿಂದ ಅರ್ಜುನಿ ಗ್ರಾಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಸಂಬಂಧಿಕರು ಪಿಕಪ್ ವಾಹನದಲ್ಲಿ ಅರ್ಜುನಿಯಿಂದ ತಮ್ಮ ಗ್ರಾಮ ಖಿಲೋರಾಗೆ ಹಿಂತಿರುಗುತ್ತಿದ್ದರು. ಈ ಮಧ್ಯೆ ರಾತ್ರಿ 12 ಗಂಟೆ ಸುಮಾರಿಗೆ ಖಮಾರಿಯಾದ ಡಿಪಿಡಬ್ಲ್ಯುಎಸ್ ಶಾಲೆಯ ಬಳಿ ವೇಗವಾಗಿ ಬಂದ ಟ್ರಕ್ ಮತ್ತು ಪಿಕಪ್ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಪಿಕಪ್ ವಾಹನ ಉರುಳಿ ಬಿದ್ದಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಭಟಪಾರ ಪೊಲೀಸರು ತಡರಾತ್ರಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಈ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 11 ಜನ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ವಾಹನದಿಂದ ಹೊರ ತೆಗೆದು ಭಟಪಾರಾ ಆಸ್ಪತ್ರೆ ಮತ್ತು ಬಲೋಡಾ ಬಜಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಬಲೋದಬಜಾರ್ ಎಸ್ಪಿ ದೀಪಕ್ ಝಾ ಅವರು ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99