ತೃತೀಯಲಿಂಗಿಯಿಂದ ಬಾಲಕನ ಮೇಲೆbಲೈಂಗಿಕ ದೌರ್ಜನ್ಯ : 7 ವರ್ಷ ಜೈಲು ಶಿಕ್ಷೆ
Wednesday, February 8, 2023
ತಿರುವನಂತರಪುರಂ : ದೇಶದಲ್ಲಿ ಕೈಂಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದ್ರೆ ಕೆಲವು ಕೈಂಗಳ ಬಗ್ಗೆ ಕೇಳಿದ್ರೆ ನಿಜಕ್ಕೂ ಶಾಕ್ ಆಗುತ್ತೆ. ಹೌದು ಕೇರಳ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದು ಸದ್ಯ ಆರೋಪಿ ತೃತೀಯ ಲಿಂಗಿಗೆ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಏಳು ವರ್ಷಗಳ ಹಿಂದೆ ಬಾಲಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು, ರಾಜ್ಯದಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಗೆ ದೋಷಿ ಎಂದು ತೀರ್ಪು ನೀಡಿದೆ.
ವಿಶೇಷ ನ್ಯಾಯಾಧೀಶ ಆಜ್ ಸುದರ್ಶನ್ ಅವರು, 16 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಚಿರಾಯಿಂಕೀಝು ಸಮೀಪದ ಅನಾಥಲವಟ್ಟಂ ಮೂಲದ ತೃತೀಯಲಿಂಗಿ ಸಚ್ಚು
ಸ್ಯಾಟ್ಸನ್ ಅಲಿಯಾಸ್ ಶೆಫಿನಾ (34) ಅವರಿಗೆ ಏಳು
ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ದಂಡ ವಿಧಿಸಿದ್ದಾರೆ.
ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ ಹೆಚ್ಚುವರಿ ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ.