ವರದಕ್ಷಿಣೆ ಕಿರುಕುಳ ಕೇಸ್- ತಲೆಮರೆಸಿಕೊಂಡಿರುವ ನಟಿ ಅಭಿನಯ ಬಂಧನಕ್ಕಾಗಿ ಲುಕ್ಔಟ್ ನೋಟಿಸ್
ಹೌಡು, ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಕೋರ್ಟ್ ಮೆಟ್ಟಿಲೇರಿದ್ದ ಅಭಿನಯ ಅತ್ತಿಗೆ ವರಲಕ್ಷ್ಮಿ ಅವರ ಪ್ರಕರಣವನ್ನು ವಿಚಾರಣೆ ಮಾಡಿದ ನ್ಯಾಯಾಲಯ ನಟಿ ಅಭಿನಯ ಕುಟುಂಬಕ್ಕೆ ಜೈಲು ಶಿಕ್ಷೆಯನ್ನು ನೀಡಿ ಆದೇಶ ಹೊರಡಿಸಿತ್ತು. ಆದರೆ ಈವರೆಗೂ ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡು ಓಡಾಡುತ್ತಿರುವ ನಟಿ ಅಭಿನಯಗೆ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ.
'ನಟಿ ಅಭಿನಯ, ಜಯಮ್ಮ (74) ಹಾಗೂ ಚೆಲುವರಾಜು (54) ಅವರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮೂವರಿಗೂ ಶಿಕ್ಷೆಯಾಗಿದ್ದು, ಮೂವರೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ನಟಿ ಅಭಿನಯ ತಮ್ಮ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಅತ್ತಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ವೇಳೆ ಮನೆಯಲ್ಲಿ ವೇಶ್ಯಾವಾಟಿಕೆಯನ್ನೂ ನಡೆಸುತ್ತಾರೆ ಎಂಬ ಆರೋಪಗಳೂ ಕೇಳಿಬಂದಿದ್ದವು. ಆದರೆ ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯೂ ನಡೆದಿತ್ತು. ಸೆಕ್ಷನ್ಸ್ ಕೋರ್ಟ್ ವಿಚಾರಣೆಯ ವೇಳೆ ನ್ಯಾಯಾಲಯವು ಶಿಕ್ಷೆ ವಿಧಿಸಿತ್ತು. ಇದರ ನಂತರ ತಲೆಮರೆಸಿಕೊಂಡು ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ನಟಿ ಅಭಿನಯ, ಸೋದರ ಹಾಗೂ ತಾಯಿ ಹೈಕೋರ್ಟ್ ಗೆ ಹೋಗಿದ್ದರು. ಆದರೆ, ಅಲ್ಲಿಯೂ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರು ಹೈಕೋರ್ಟ್ ಸಹ ಸೆಷನ್ಸ್ ಕೋರ್ಟ್ ಆದೇಶವನ್ನ ಎತ್ತಿ ಹಿಡಿದಿದ್ದರು.
'ಆರೋಪಿಗಳ ಬಗ್ಗೆ ಯಾವುದಾದರೂ ಮಾಹಿತಿ ಇದ್ದರೆ ಮೊಬೈಲ್ ನಂಬರ್ 9480801722 (ಇನ್‌ಸ್ಪೆಕ್ಟರ್), 080-22942512 (ಚಂದ್ರಾಲೇಔಟ್ ಠಾಣೆ), 9901291829 (ಪಿಎಸ್‌ಐ) ಕರೆ ಮಾಡಿ ತಿಳಿಸಬಹುದು' ಎಂದು ಪೊಲೀಸರು ಕೋರಿದ್ದಾರೆ.