ಸಧ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ: ಸದನದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ
Tuesday, February 14, 2023
ಬೆಂಗಳೂರು: ಕಳೆದ ಹಲವು ದಿನಗಳಿಂದ ಬೆಲೆ ಏರಿಕೆಗೆ ತತ್ತರಿಸಿರುವ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ ಇದೀಗ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ನೀಡಿರುವ ಮೂಲಕ ರಾಜ್ಯಕ್ಕೆ ಸದ್ಯಕ್ಕೆ ಬಿಗ್ ರಿಲೀಫ್ ಕೊಟ್ಟಿದ್ದಾರೆ.
ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ನಾಗರಾಜ್ ಯಾದವ್ ವಿಷಯ ಪ್ರಸ್ತಾಪಿಸಿದರು. ಸರ್ಕಾರ ಜನರಿಗೆ ವಿದ್ಯುತ್ ಬರೆ ಹಾಕಲು ಹೊರಟಿದೆ. ಮಾಧ್ಯಮಗಳಲ್ಲಿ ವಿದ್ಯುತ್ ದರ ಏರಿಕೆ ಅಂತ ಸುದ್ದಿ ಬರುತ್ತಿದೆ. ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡದಂತೆ ಒತ್ತಾಯ ಮಾಡಿದರು.
ಇದಕ್ಕೆ ಉತ್ತರ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್, ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ದರ ಸಂಖ್ಯೆ ಇಲ್ಲ. ವಿದ್ಯುತ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಸದ್ಯಕ್ಕೆ ದರ ಏರಿಕೆ ಬಗ್ಗೆ ಯಾವುದೇ ಯೋಚನೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.