ಮಾಳ: ಚೆಕ್ ಪೋಸ್ಟ್ ಬಳಿ ಟ್ಯಾಂಕರ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
Thursday, February 2, 2023
ಕಾರ್ಕಳ: ಮಾಳ ಚೆಕ್ ಪೋಸ್ಟ್ ಬಳಿ ಟ್ಯಾಂಕ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಬೈಕ್ ಸಹಸವಾರೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ಸವಾರ ವಿದ್ಯಾರ್ಥಿ ಮಹಾರಾಷ್ಟ್ರ ಹಾಗೂ ಸಹಸವಾರೆ ವಿದ್ಯಾರ್ಥಿನಿ ಕೋಲಾರ ಮೂಲದವರಾಗಿದ್ದು ಕರಾವಳಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇವರಿಬ್ಬರು ಹೊರನಾಡು ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.