
ಬ್ರೇಕಿಂಗ್ ನ್ಯೂಸ್ : ಯಕ್ಷರಂಗದ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು ವಿಧಿವಶ
ಯಕ್ಷರಂಗದ ಭಾಗವತಿಕೆಯ ಭೀಷ್ಮ ಎಂದೇ ಖ್ಯಾತರಾಗಿರುವ ಹಿರಿಯ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು ಸಂಜೆ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಕಳೆದ ಕೆಲವು ದಶಕಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮ ಕಂಚಿನ ಕಂಠದ ಮೂಲಕ ಸುಪ್ರಸಿದ್ಧರಾಗಿದ್ದ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದರು. 86 ವರ್ಷ ಪ್ರಾಯದ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ.ನಾಲ್ವರು ಪುತ್ರರ ಪೈಕಿ ಕಳೆದ ವರ್ಷ ಓರ್ವ ಪುತ್ರ ಪ್ರಸಾದ್ ಭಾಗವತರು ನಿಧನರಾಗಿದ್ದರು. ಮೂವರು ಪುತ್ರರು, ಕುಟುಂಬ ವರ್ಗ ಹಾಗೂ ಅಪಾರ
ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಇಂದು ರಾತ್ರಿ ಒಂದು ಗಂಟೆಯೊಳಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.