ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್
Tuesday, February 14, 2023
ನಿನ್ನೆಯಷ್ಟೇ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಂಗಳೂರಿಗೆ ಬಂದಿಳಿದಿದ್ದಾರೆ. ಎರಡು ದಿನಗಳ ಕಾಲ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಚಿತ್ರೀಕರಣಗೊಳ್ಳುತ್ತಿದ್ದು, ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ನಿನ್ನೆಯಿಂದಲೇ ಮಂಗಳೂರಿನಲ್ಲಿ ಜೈಲರ್ ಸಿನಿಮಾದ ಶೂಟಿಂಗ್ ನಡೆದಿದೆ. ರಜನಿ ಜೊತೆ ಶಿವರಾಜ್ ಕುಮಾರ್ ಇರುವ ಫೋಟೋ ವೈರಲ್ ಕೂಡ ಆಗಿದೆ
ಮೊನ್ನೆ ರಜನಿಕಾಂತ್ ಮಂಗಳೂರು ಏರ್ ಪೋರ್ಟಿಗೆ ಬಂದಾಗ ಅಸಂಖ್ಯಾತ ಅಭಿಮಾನಿಗಳು ಅವರಿಗಾಗಿ ಕಾಯುತ್ತಿದ್ದರು. ಅಭಿಮಾನಿಗಳತ್ತ ಕೈ ಬೀಸಿ ಕಾರಿನಲ್ಲಿ ರಜನಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ಶೂಟಿಂಗ್ ಗಾಗಿ ಅವರು ಮಂಗಳೂರಿಗೆ ಬಂದಿದ್ದು, ಜೊತೆಗೆ ಮಂಗಳೂರಿನ ಹಲವು ದೇವಸ್ಥಾನಗಳಿಗೂ ಅವರು ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ
ರಜನಿಕಾಂತ್ ಜೊತೆ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಭಾಗಿಯಾಗಿದ್ದು, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್, ಈ ಸಿನಿಮಾದಲ್ಲಿ ತೆರೆಹಂಚಿಕೊಳ್ಳುತ್ತಿದ್ದಾರೆ. ರಜನಿ ಮತ್ತು ಶಿವಣ್ಣ ಭಾಗದ ಚಿತ್ರೀಕರಣ ಇದೀಗ ಮಂಗಳೂರಿನಲ್ಲಿ ನಡೆಯುತ್ತಿದೆ. ಭದ್ರತೆಯ ದೃಷ್ಟಿಯಿಂದ ಚಿತ್ರತಂಡ ಯಾವುದೇ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ.