ಮಗಳ ಮದುವೆಗೆ ಸಾಲ : ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆಗೆ ಶರಣು
Friday, February 24, 2023
ಹಾವೇರಿ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಒಂದೇ ಕುಟುಂಬದ ತಂದೆ ಹನುಮಂತಗೌಡ ಪಾಟೀಲ (54), ತಾಯಿ ಲಲಿತಾ ಪಾಟೀಲ (50), ಮತ್ತು ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹನುಮಂತಗೌಡ ಪಾಟೀಲ ದಂಪತಿ ಸುಮಾರು 25 ಲಕ್ಷ ರುಪಾಯಿ ಸಾಲ ಮಾಡಿ ಮಗಳ ಮದುವೆಯನ್ನು ಮಾಡಿದ್ದರು. ಈ ಸಾಲಬಾಧೆಯನ್ನು ತಾಳಲಾರದೆ
ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಕಾರಣಕ್ಕೆ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ತಿಳಿದು ನೊಂದ ಮಗಳು ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ನಡೆದ ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.