ಮುುಡಾರು : ಮಹಿಳೆ ನೇಣು ಬಿಗಿದು ಆತ್ಮಹತ್ಯೆ
Tuesday, February 7, 2023
ಕಾರ್ಕಳ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಹೆಪೆಜಾರು ಎಂಬ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಹೆಪೆಜಾರು ನಿವಾಸಿ ಲಲಿತಾ (68 ವರ್ಷ) ಆತ್ಮಹತ್ಯೆ
ಮಾಡಿಕೊಂಡವರು. ಅವರು ಕಳೆದ ಒಂದು ವರ್ಷದ ಹಿಂದೆ ಮನೆಯಲ್ಲಿ ದನವನ್ನು ಕಟ್ಟುವ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಕಾಲಿಗೆ ಏಟಾಗಿ ಚಿಕಿತ್ಸೆ ನೀಡಿದರೂ ಸರಿಯಾಗಿ ನಡೆದಾಡಿದರು .ಅಲ್ಲದೆ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೈದ್ಯರಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಜೀವನದಲ್ಲಿ ಜಿಗುಪ್ಪೆಗೊಂಡು
ಸೋಮವಾರ ತಮ್ಮ ಮನೆಯ ಸ್ನಾನದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.