ಕೆಎಸ್ ಆರ್ ಟಿಸಿ ಬಸ್ - ಕಾರು ಮುಖಾಮುಖಿ ಡಿಕ್ಕಿ: ಕಾರಿನಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವು
Monday, February 13, 2023
ಮಂಗಳೂರು : ಕಾರು ಮತ್ತು ಎಸ್.ಆರ್.ಟಿ.ಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 14 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಬ್ರಾಂತಿಕಟ್ಟೆ ಎಂಬಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಧರ್ಮಸ್ಥಳದ ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಮರ್ಧಾಳ ಗ್ರಾಮದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು, ಮತ್ತೊಂದು ಕಾರು ಟೇಕ್ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಕಾರಿನಲ್ಲಿದ್ದ ನಾಲ್ವರಿಗೆ ಗಾಯಾಳುಗಳಾಗಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.