-->

 ವರಾಹ ರೂಪಂ ವಿವಾದ : ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್

ವರಾಹ ರೂಪಂ ವಿವಾದ : ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್

‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಇಂದು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ (Kantara) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದ್ದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.

ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ  50 ಸಾವಿರ ಬಾಂಡ್  ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರ್ಗಂದೂರ್ ಗೆ ಮಧ್ಯಂತರ ರಕ್ಷಣೆ ನೀಡಿದೆ. ತನಿಖೆ ವೇಳೆ ಬಂಧಿಸದಂತೆ ಸುಪ್ರೀಂ ಸೂಚಿಸಿದೆ

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99