ಮಂಗಳೂರು ಜ್ಯುವೆಲ್ಲರಿ ಅಂಗಡಿಯಲ್ಲಿ ಕೊಲೆ ಪ್ರಕರಣ: ಕಾಸರಗೋಡಿನಲ್ಲಿ ಆರೋಪಿಯ ಬಂಧನ
Friday, March 3, 2023
ಮಂಗಳೂರು : ಮಂಗಳೂರಿನಲ್ಲಿ ಹಾಡುಹಗಲೇ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆಗೈದ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಒಂದು ತಿಂಗಳ ಬಳಿಕ ಕಾಸರಗೋಡಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್(33) ಬಂಧಿತ ಆರೋಪಿ, ಕಳೆದ ಫೆಬ್ರವರಿ 3ರಂದು ಮಂಗಳೂರಿನ ಹಂಪನಕಟ್ಟೆಯಲ್ಲಿರೋ ಜುವೆಲ್ಲರಿಗೆ ನುಗ್ಗಿ ಅತ್ತಾವರ ನಿವಾಸಿ ರಾಘವ(50) ಎಂಬವರನ್ನು ಕೊಲೆಗೈದು ಎಸ್ಕೆಪ್ ಆಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಸರಗೋಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಡಿವೈಎಸ್‌ಪಿ ಸುಧಾಕರನ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.ಆರೋಪಿ ದರೋಡೆ ನಡೆಸುವ ಉದ್ದೇಶದಿಂದ ಕೊಲೆ ಮಾಡಿರುವುದಾಗಿ ತಿಳಿದು ಬಂದಿದ್ದು, ಅತ್ತಾವರ ನಿವಾಸಿ ರಾಘವ ಆಚಾರ್ಯ ಎಂಬವರು ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿತ್ತು. ಅಂಗಡಿ ಮಾಲಕರು ಊಟ ಮಾಡಿ ಬಂದಾಗ ಘಟನೆ ಗಮನಕ್ಕೆ ಬಂದಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.