
ಕೋಲಾರ: ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಕೊಂದು ಪೊಲೀಸ್ ಠಾಣೆಗೆ ಬಂದ ಪತಿ.!
Monday, March 6, 2023
ಕೋಲಾರ: ವ್ಯಕ್ತಿಯೋರ್ವ ತನ್ನ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯ ಅಮರಾವತಿ ಬಡಾವಣೆಯಲ್ಲಿ ನಡೆದಿದೆ.
ನಂದಿನಿ 34 ಪತಿಯಿಂದಲೆ ಕೊಲೆಯಾದ ಗೃಹಿಣಿ. ನಾಗರಾಜ್ ಎಂಬಾತ ತನ್ನ ಪತ್ನಿ ನಂದಿನಿ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಹೆಂಡತಿಯನ್ನು ಕೊಂದ ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ನಿಜ ಘಟನೆಯನ್ನು ವಿವರಿಸಿ ಶರಣಾಗಿದ್ದಾನೆ.
ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.