ಮುದ್ರಾಡಿ: ವೃದ್ಧೆ ನೇಣು ಬಿಗಿದು ಆತ್ಮಹತ್ಯೆ
Tuesday, March 14, 2023
ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ವೃದ್ಧೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಲ್ಲಾಡಿಯ ಕಮಲ ಶೆಡ್ತಿ (86 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಕಮಲಾ ಶೆಡ್ತಿ ಅವರು ಕಳೆದ 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮಾರ್ಚ್ 13ರಂದು ಮಧ್ಯಾಹ್ನ ತನ್ನ ಮನೆಯ ಒಳಗೆ ಮರದ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.