
UDUPI : ಕುಂದಾಪುರದ ವಾಜಪೇಯಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣಾ ಕಣದಿಂದ ಹಿಂದಕ್ಕೆ..!
Monday, April 3, 2023
ಕುಂದಾಪುರದ ವಾಜಪೇಯಿ ಅಂತ ಖ್ಯಾತಿ ಪಡೆದ ಸರಳ ರಾಜಕಾರಣಿ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಅಂತ ಘೋಷಣೆ ಮಾಡಿದ್ದಾರೆ..
ಕುಂದಾಪುರ ಕ್ಷೇತ್ರದಿಂದ ನಿರಂತರ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ, ಇವರು ನಾಲ್ಕು ಬಾರಿ ಬಿಜೆಪಿಯಿಂದ ಮತ್ತು ಒಂದು ಬಾರಿ ಪಕ್ಷೇತರರಾಗಿ ಆಯ್ಕೆಯಾಗಿದ್ದರು "ಸ್ವಇಚ್ಚೆ ಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಅಂತ ತಮ್ಮ ಪ್ರಕಟನೆಯಲ್ಲಿ ಬರೆದುಕೊಂಡಿದ್ದಾರೆ. ನಾನು ಶಾಸಕನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ಯಂತ ನಿಷ್ಠೆಯಿಂದ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ. ನನ್ನನ್ನು ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕುಂದಾಪುರದ ಎಲ್ಲಾ ವರ್ಗದ ಜನತೆಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ” ಎಂದು ಬರೆದಿದ್ದಾರೆ. ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ಕಣದಿಂದ ಹಿಂದಕ್ಕೆ ಸರಿದದ್ದು ಬಾರೀ ಚರ್ಚೆಗೆ ಗ್ರಾಮವಾಗಿ, ಹಾಲಾಡಿಯವರ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ..