UDUPI : ಬಾತ್ ರೂಮ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
Wednesday, April 5, 2023
ಹಾಸ್ಟೇಲ್ ನ ಬಾತ್ ರೂಮ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಖಾಸಗಿ ಕಾಲೇಜು ವಿದ್ಯಾರ್ಥಿ ಅನೀಶ್ ದಾಸ್ ಗುಪ್ತ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಅನೀಶ್ ದಾಸ್, ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ತಾನು ವಾಸವಿದ್ದ ಹಾಸ್ಟೇಲ್ ನ ಬಾತ್ ರೂಮ್ ನಲ್ಲಿ ವೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.