UDUPI : ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವು
Monday, May 29, 2023
ಜೋಕಾಲಿಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಜೋಕಾಲಿ ಸಿಲುಕಿ ಬಾಲಕಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ತಾಲೂಕು ನಿಟ್ಟೆ ಗ್ರಾಮ ಕೆಮ್ಮಣ್ಣುವಿನ 9ವರ್ಷದ ಮಾನ್ವಿ ಮೃತ ಸಾವನ್ನಪ್ಪಿದ ಬಾಲಕಿ.
ಲಕ್ಷ್ಮಿ ಪೂಜಾರಿ ಎಂಬವರ ಮಗಳು, ಮಾನ್ವಿ ಪಕ್ಕದ ಚಿಕ್ಕಪ್ಪನ ಮನೆಗೆ ಆಟವಾಡಲೆಂದು ಹೋಗಿದ್ದ ವೇಳೆ ಘಟನೆ ನಡೆದಿದೆ. ಸಮೀಪದ ಮನೆಯ ಮತ್ತೊಬ್ಬ ಬಾಲಕಿಯ ಜೊತೆ ಸೀರೆಯಲ್ಲಿ ಜೋಕಾಲಿ ಕಟ್ಟಿ ಆಡುತ್ತಿದ್ದರು. ಸೀರೆ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಅವಘಡ ಸಂಭವಿಸಿದೆ. ಸ್ಥಳದಲ್ಲಿದ್ದವರು ತಕ್ಷಣ ಬಾಲಕಿಯನ್ನು ನಿಟ್ಟೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದಿದೊಯ್ದು ಚಿಕಿತ್ಸೆ ನೀಡಲು ಪ್ರಯತ್ನಿಸಲಾಯ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.