UDUPI : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Tuesday, May 30, 2023
ಗೇರುಬೀಜ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿ ಸಮೀಪದ ಬಲಾಯಿಪಾದೆ ಜಂಕ್ಷನ್ ನಲ್ಲಿ ನಡೆದಿದೆ.
ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಅವಘಡ ಸಂಭವಿಸಿದ್ದು, ಲಾರಿ ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿತ್ತು, ಬಲಾಯಿಪಾದೆ ಜಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟಗಾಯದೊಂದಿಗೆ ಪಾರಾಗಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.