UDUPI : ಉದ್ಯೋಗ ಸಿಗದೇ ನೊಂದ ಯುವತಿ ಆತ್ಮಹತ್ಯೆ
Monday, May 29, 2023
ಉದ್ಯೋಗ ಸಿಗದೇ ಬೇಸೆತ್ತು ಖಿನ್ನತೆಗೆ ಒಳಗಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಾಲ್ನೋಡು ಗ್ರಾಮದಲ್ಲಿ ನಡೆದಿದೆ. ಕಾಲ್ನೋಡು ಗ್ರಾಮದ ಗೌತಮಿ (22) ಆತ್ಮಹತ್ಯೆಗೆ ಶರಣಾದ ಯುವತಿ.
ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂ ಕಾಮ್ ಮುಗಿಸಿ ಬ್ಯಾಂಕಿಂಗ್ ಪರೀಕ್ಷೆ ಹಾಗೂ ಇತರೆ ಕಂಪನಿ ನೇಮಕಾತಿಗೆ
ಪರೀಕ್ಷೆ ಬರೆದಿದ್ದರೂ ಗೌತಮಿಗೆ ಉದ್ಯೋಗ ಸಿಕ್ಕಿರಲಿಲ್ಲ. ಇದರಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಮನೆಯ ಮೊದಲ ಮಹಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.