UDUPI : ಕಸದಲ್ಲಿ ಸಿಕ್ಕಿದ ಉಂಗುರ ; ಹಿಂದಿರುಗಿಸಿ ಮಾನವೀಯತೆ ಮೆರೆದ ಮಹಿಳೆ
Monday, May 29, 2023
ಎಸ್‌ಎಲ್‌ಆರ್‌ಎಂ ಘಟಕದ ಸ್ವಚ್ಚತಾ ಸಿಬ್ವಂದಿಗೆ ಕಸದಲ್ಲಿ ಸಿಕ್ಕಿದ ಚಿನ್ನದ ಉಂಗುರವನ್ನು ವಾರಸುದಾರರಿಗೆ ಹಿಂದಿರುಗಿಸಿದ ಘಟನೆ ಉಡುಪಿಯ ಶಂಕರನಾರಾಯಣದಲ್ಲಿ ನಡೆದಿದೆ.
ಪ್ರತಿದಿನ ಕಸ ನೀಡುವ ಮನೆಯವರ 2 ಗ್ರಾಂ ತೂಕದ ಚಿನ್ನ ಉಂಗುರ ಕಳೆದು ಹೋಗಿತ್ತು. ಈ ಬಗ್ಗೆ ಕಸ ವಿಲೇವಾರಿ ಘಟಕದವರಿಗೆ ಮಾಹಿತಿ ನೀಡಿ, ಕಸದ ಜೊತೆ ಬಂದಿದ್ದರೆ ನೀಡುವಂತೆ ವಿನಂತಿಸಿಕೊಂಡಿದ್ದರು. ಅದರಂತೆ ಬೈಲೂರು ಮೂಡುಬೈಲೂರಿನಲ್ಲಿ ಕಸ ವಿಲೇವಾರಿ ಮಾಡುವಾಗ ಕಸದಲ್ಲಿ ಚಿನ್ನದ ಉಂಗುರ ದೇವಕಿ ಅವರಿಗೆ ಸಿಕ್ಕಿತ್ತು. ಕೂಡಲೇ ಅವರು ಸಂಬಂಧಪಟ್ಟ ಮನೆಯವರಿಗೆ ಮಾಹಿತಿ ನೀಡಿ ವಾರೀಸುದಾರರಿಗೆ ಹಸ್ತಾಂತರಿಸಿದ್ದಾರೆ.