Crime : ಮದುವೆಯಾಗಲು ಹೆಣ್ಣು ಸಿಗದೆ ಮನನೊಂದು ಯುವಕ ಆತ್ಮಹತ್ಯೆ
Thursday, June 29, 2023
ಮದುವೆ ಯಾಗಲು ಹೆಣ್ಣು ಸಿಗುತ್ತಿಲ್ಲ ಅಂತ ಮನನೊಂದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ನಾಗರಾಜ ಗಣಪತಿ ಗಾಂವ್ಕರ್ (35) ಮೃತ ಯುವಕ.
ವೃತ್ತಿಯಲ್ಲಿ ಕೃಷಿಕನಾಗಿದ್ದ ನಾಗರಾಜ್ ಮದುವೆಯ ಕನಸು ಕಂಡು, ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದ. ಸಂಬಂಧಿಕರು, ಬ್ರೋಕರ್ ಗಳ ಬಳಿ ಹೆಣ್ಣು ಹುಡುಕಿಕೊಡಲು ಹೇಳಿದ್ದ. ಆದರೆ ಎಲ್ಲಿಯೂ ನಾಗರಾಜ್‍ಗೆ ಹೆಣ್ಣು ಸಿಗುತ್ತಿರಲಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿದ್ದ ನಾಗರಾಜ್ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿ, ಮನೆ ಸಮೀಪದ ಗುಡ್ಡಕ್ಕೆ ತೆರಳಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.