UDUPI : ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
Thursday, June 1, 2023
ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೆರಾಡಿ ಗ್ರಾಮದಲ್ಲಿ ನಡೆದಿದೆ. ಇಲ್ ಶಶಿಕಾಂತ (25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಕೆರಾಡಿಯಿಂದ ಚಿತ್ತೂರು ಕಡೆಗೆ ಹೋಗುತ್ತಿರುವಾಗ ಚಪ್ಪರಮಕ್ಕಿ ಕೂರ್ಕೊಗೆ ಎಂಬಲ್ಲಿ ರಸ್ತೆ ಬದಿ ಶಶಿಕಾಂತ್ ಅವರ ಬೈಕ್ ನಿಂತಿರುವುದು ಗಮನಕ್ಕೆ ಬಂದಿದೆ. ನಂತರ ಶಶಿಕಾಂತ್ ಸ್ನೇಹಿತರು ಅಭಯಾರಣ್ಯದಲ್ಲಿ ಹುಡುಕಾಡಿದಾಗ ಶಶಿಕಾಂತ್ ಮೃತದೇಹ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ