UDUPI ; ಬಸ್ ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿ : ಯುವಕ ಸಾವು
Friday, June 9, 2023
ಬಸ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಥೀಮ್ ಪಾರ್ಕ್ ಸಮೀಪ ನಡೆದಿದೆ.
ಜಾರ್ಕಳ ನಿವಾಸಿ ಕಾರ್ತಿಕ್ (26) ಮೃತ ದುರ್ದೈವಿ. ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಬೈಲೂರಿನಿಂದ ಜಾರ್ಕಳ ಕಡೆಗೆ ಸಾಗುತ್ತಿದ್ದ ಸ್ಕೂಟಿ ಮಧ್ಯೆ ಡಿಕ್ಕಿ ಹೊಡೆದಿದ್ದು, ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಕೆಲಸ ಮುಗಿಸಿ ಮನೆಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರು ಪತ್ನಿ ಮತ್ತು ಪುಟ್ಟ ಮಗುವನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.