-->
UDUPI : ಭೀಕರ ಅಪಘಾತ : ಇಬ್ಬರು ಶಿಕ್ಷಕರ‌‌ ಸಾವು

UDUPI : ಭೀಕರ ಅಪಘಾತ : ಇಬ್ಬರು ಶಿಕ್ಷಕರ‌‌ ಸಾವು

ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು  ಗಂಭೀರ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ.
 ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಮೃತಪಟ್ಟವರು. ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ  ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99