UDUPI : ಬೈಕ್ ಡಿಕ್ಕಿ ; ರಸ್ತೆ ಬದಿ ನಿಂತಿದ್ದ ಪಾದಚಾರಿ ಸಾವು
Thursday, June 8, 2023
ರಸ್ತೆ ಬದಿ ನಿಂತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಗುಂಡಿ ಗ್ರಾಮದ ಸಾಸ್ತಾನ ಜಂಕ್ಷನ್‌ನಲ್ಲಿ ನಡೆದಿದೆ.
ಸಾಸ್ತಾನ ಗುಂಡಿ ಗ್ರಾಮದ ನಿವಾಸಿ ಪಿ.ಎಸ್ ಮೈದಿನಬ್ಬ(75) ಸಾವನ್ನಪ್ಪಿದವರು. ಸಾಸ್ತಾನ ಜಂಕ್ಷನ್‌ನ ಡಿವೈಡರ್ ಬಳಿ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದರು. ಇದೇ ಸಂದರ್ಭ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೈದಿನಬ್ಬ ಗಂಭೀರ ಗಾಯಗೊಂಡಿದ್ದು, ಬಳಿಕ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.