UDUPI : ಕಿರುಕುಳ ನೀಡಿದ ಯುವಕನಿಗೆ ಚಪ್ಪಲಿ ಏಟು ನೀಡಿದ ಯುವತಿ..!..ವಿಡಿಯೋ ವೈರಲ್
Friday, June 9, 2023
ಹಾಸ್ಟೆಲ್ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಯುವಕನಿಗೆ
ಯುವತಿಯಿಂದ ಚಪ್ಪಲಿ ಏಟು ನೀಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಒಕ್ವಾಡಿ ರಸ್ತೆಯಲ್ಲಿ ನಡೆದಿದೆ.
ಬಾರ್ಕೂರು ಮೂಲದ ನಜೀರ್ ವಿದ್ಯಾರ್ಥಿನಿಗೆ ಕಿರುಕುಳ ಕೊಟ್ಟ ಯುವಕ. ಬಿಜಾಡಿ ಒಪ್ಪೋಡಿ ರಸ್ತೆಯಲ್ಲಿರುವ ಹಾಸ್ಟೆಲ್ನಿಂದ ವಿದ್ಯಾರ್ಥಿನಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ಯುವಕ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದಾನೆ.
ಇದರಿಂದ ಭಯಗೊಂಡ ಯುವತಿ ಕೂಗಿಕೊಂಡಾಗ ಸ್ಥಳೀಯರು ಸೇರಿ, ಯುವಕನನ್ನು ಹಿಡಿದಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಕಿರುಕುಳ ನೀಡಿದ ಯುವಕನಿಗೆ ಸರಿಯಾಗಿ ಚಪ್ಪಲಿ ಏಟು ನೀಡಿದ್ದಾಳೆ.
ಬಳಿಕ ಯುವಕನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.