Crime ; ಆನ್‌ಲೈನ್ ಜೂಜಾಟದಲ್ಲಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ
Sunday, July 2, 2023
ಆನ್‌ಲೈನ್ ಜೂಜಾಟದ ಚಟದಿಂದ ಲಕ್ಷಾಂತರ ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಶಿಯಲ್ಲಿ ನಡೆದಿದೆ. ವಿಜೇತ್ ಶಾಂತಾರಾಮ ಹೆಗಡೆ (37) ಆತ್ಮಹತ್ಯೆ ಮಾಡಿಕೊಂಡ ಯುವಕ.
ವಿಜೇತ್ 65 ಲಕ್ಷ ರೂಪಾಯಿಗೂ ಹೆಚ್ಚಿನ ಹಣವನ್ನು ಆನ್‌ಲೈನ್ ಗೇಮ್‌ನಲ್ಲಿ ಕಳೆದುಕೊಂಡಿದ್ದ ಎನ್ನಲಾಗಿದ್ದು, ಈತ ಬೆಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ನಿನ್ನೆ ಮನೆಯಿಂದ ಹೊರಟಿದ್ದ. ಆದರೆ, ಡೆತ್ನೋಟ್ ಬರೆದು, ಕುಳವೆ ಗ್ರಾಮದ ಬಳಿ ನೇಣು ಬಿಗಿದುಕೊಂಡು ಸಾವಿನ ಹಾದಿ ಹಿಡಿದಿದ್ದಾನೆ. ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.