UDUPI : ಉಡುಪಿಯಲ್ಲಿ ವರುಣನ ಅಬ್ಬರ ; ಜುಲೈ 6 ಶಾಲಾ ಕಾಲೇಜುಗಳಿಗೆ ರಜೆ
Wednesday, July 5, 2023
ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು ನಾಳೆ (ಜುಲೈ 6) ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜುಲೈ 6 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.