UDUPI ; ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ಕಳ್ಳತನ ನಡೆಸಿದ ಆರೋಪಿ ಬಂಧನ
Tuesday, July 4, 2023
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸ್ ರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. (32) ಬಂಧಿತ ಆರೋಪಿ.
ಈತ ಖಾಸಗಿ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದನೆನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಕೊಲ್ಲೂರಿಗೆ ದರ್ಶನಕ್ಕೆ ಬಂದಿದ್ದ ಕಾಸರಗೋಡು ಮೂಲದ ಸುರತ್ಕಲ್ ನಿವಾಸಿ ಪ್ರವೀಣ್ ಎನ್ನುವರು ಪತ್ನಿಯೊಂದಿಗೆ ಬಂದಿದ್ದರು. ಮನೆಯಲ್ಲಿ ಯಾರು ಇಲ್ಲದ ಕಾರಣ ಪತ್ನಿ ಮನೆಯಲ್ಲಿದ್ದ 13 ½ ಪವನ್ ಚಿನ್ನಾಭರಣಗಳನ್ನು ಚಿಕ್ಕ ಪರ್ಸ್ ನಲ್ಲಿ ಹಾಕಿ ವ್ಯಾನಟಿ ಬ್ಯಾಗ್ ನಲ್ಲಿಟ್ಟುಕೊಂಡು ಬಂದಿದ್ದು ದೇವರ ದರ್ಶನ ಮಾಡಿ ಹೊರಗಡೆ ಬಂದಾಗ ವ್ಯಾನಟಿ ಬ್ಯಾಗ್ ಜೀಪ್ ಓಪನ್ ಆಗಿದ್ದು ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳವಾಗಿದ್ದು ಅದರಲ್ಲಿದ್ದ 4 ಲಕ್ಷದ 75 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡ ಕೊಲ್ಲೂರು ಪೊಲೀಸ್ ರು ಪರ್ಸ್ ನಲ್ಲಿದ್ದ 7½ ಪವನ್ ಚಿನ್ನದ ಚೈನ್, 3 ಪವನ್ ತೂಕದ ಎರಡು ಚಿನ್ನದ ಬಳೆ, 1½ ಪವನ್ ಚಿನ್ನದ ಚೈನ್, ½ ಪವನ್ ಚಿನ್ನದ ಬಳೆ, 1 ಪವನ್ ತೂಕದ 4 ಜೊತೆ ಚಿನ್ನದ ಕಿವಿ ಓಲೆ ಸಹಿತ ಒಟ್ಟು 13½ ಪವನ್ (108 ಗ್ರಾಂ) ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ.