UDUPI : ನೈತಿಕ ಪೊಲೀಸ್‌ಗಿರಿ ; ಐವರ ಬಂಧನ
Wednesday, August 2, 2023
ಕಾರಿನಲ್ಲಿ ತೆರಳುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ.
ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಚಿತ್ ಸಫಲಿಗ ಆರೋಪಿಗಳು.
ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಮತ್ತು ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಆರೋಪಿಗಳು ಇವರ ಕಾರನ್ನು ಹಿಂಬಾಲಿಸಿ ಮತ್ತೊಂದು ಕಾರಿನಲ್ಲಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದಾರೆ. ವೇಳೆ ಕಾರಿನಲ್ಲಿದ್ದ ಮಹಿಳೆಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದವರನ್ನು ವಿಭಿನ್ನ ಕೋಮಿನವರು ಎಂದು ತಿಳಿದು ಹಿಂಬಾಲಿಸಿ ಅಡ್ಡಗಟ್ಟಿ ನಿಂದಿಸಿದ್ದಾರೆ ಎನ್ನಲಾಗಿದೆ.