UDUPI ; ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ; ಸಿಐಡಿ ತನಿಖೆ ಚುರುಕು
Thursday, August 10, 2023
ಉಡುಪಿಯ ಪಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಂಡಿದೆ.
ಪ್ರಕರಣದ ಸಂಬಂಧ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿ ಆಗಮಿಸಿ, ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ, ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ ಜೊತೆ ಚರ್ಚೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಬಳಿಕ ಘಟನೆ ನಡೆದ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್ ಕಾಲೇಜಿಗೆ ಭೇಟಿ ನೀಡಿ,
ಘಟನೆ ನಡೆದ ಶೌಚಾಲಯ ಕಾಲೇಜಿನ ಕೊಠಡಿಗಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಕಾಲೇಜಿನ ಸಿಬ್ಬಂದಿ, ಆಡಳಿತ ಮಂಡಳಿಯ ಜೊತೆ ಸಿಐಡಿ ಎಡಿಜಿಪಿ ಮಾತನಾಡಿದ್ದಾರೆ..