UDUPI : ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ನಾಪತ್ತೆ
Friday, August 18, 2023
ಮೀನುಗಾರಿಕೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ. ಗೋಪಾಲ ಶನಿಯಾರ್ ನಾಯಕ್ (35) ನಾಪತ್ತೆಯಾದ ಮೀನುಗಾರ.
ಇತರ ಮೀನುಗಾರರ ಜತೆ ಮಲ್ಪೆ ಬಂದರಿನಿಂದ ಬೋಟಿನಲ್ಲಿ ತೆರಳಿದ್ದ ಗೋಪಾಲ ನಾಯಕ್, ಮೀನುಗಾರಿಕೆ ನಡೆಸುತ್ತಿರುವಾಗ ಆಕಸ್ಮಿಕವಾಗಿ ಬೋಟಿನಿಂದ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾಾರೆ. ಕೂಡಲೇ ಬೋಟಿನಲ್ಲಿದ್ದವರು ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಲಿಲ್ಲ. ಈ
ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.