UDUPI ; ಸಂಬಂಧಿಕರ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳವುಗೈದ ಕಳ್ಳ
Thursday, August 24, 2023
ಉಡುಪಿಯ ಉದ್ಯಾವರ ಬೊಳ್ಜೆಯ ಮನೆಯೊಂದರಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಪೊಲೀಸರು ಬಂಧಿಸಿ ಚಿನ್ನಾಭರಣ, ನಗದು, ಸ್ಕೂಟಿ ಸಹಿತ 8 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಟಪಾಡಿ ಏಣಗುಡ್ಡೆಯ ಅಚ್ಚಡ ನಿವಾಸಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ ಬಂಧಿತ ಆರೋಪಿ.
ಕೆಲ ದಿನಗಳ ಉದ್ಯಾವರ ಬೊಳ್ಜೆಯ ಅನಿತಾ ಡಿ. ಸಿಲ್ವಾ ಅವರು ಕೆಲಸಕ್ಕೆ ಹೋಗಿದಾಗ ಕಳ್ಳತನ ನಡೆದಿತ್ತು. ಮನೆಯ ಬೆಡ್ ರೂಮ್‌ನ ಕಪಾಟಿನ ಲಾಕರ್‌ನ್ನು ಮುರಿದ ಕಳ್ಳರು ಚಿನ್ನಾಭರಣ ಇಟ್ಟಿದ್ದ ಪೆಟ್ಟಿಗೆಯನ್ನು ಕದ್ದೊಯ್ದಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ ಅನಿತಾ ಡಿ. ಸಿಲ್ವ ಅವರ ಸಂಬಂಧಿಕನಾಗಿದ್ದು ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದ. ಕಳ್ಳತನ ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರಿಗೆ ಆರೋಪಿ ಜೋನ್ ಮೇಲೆ ಹೆಚ್ಚಿನ ಸಂಶಯ ವ್ಯಕ್ತವಾಗಿತ್ತು. ಆತನನ್ನೇ ಕೆಂದ್ರೀಕರಿಸಿ ತನಿಖೆ ಮುಂದುವರಿಸಿದಾಗ, ಆತನಲ್ಲಿ ಹಣ, ಮತ್ತು ಬಂದಾರ ಅಡವಿಟ್ಟ ಚೀಟಿಗಳು ದೊರಕಿದ್ದವು.