MDMA ಮಾರಾಟ ಜಾಲ ಭೇದಿಸಿದ ಪೊಲೀಸರು: ಇಬ್ಬರು ಖತರ್ನಾಕ್ ಆರೋಪಿಗಳು ಅರೆಸ್ಟ್
MDMA ಮಾರಾಟ ಜಾಲ ಭೇದಿಸಿದ ಪೊಲೀಸರು: ಇಬ್ಬರು ಖತರ್ನಾಕ್ ಆರೋಪಿಗಳು ಅರೆಸ್ಟ್
ಮಂಗಳೂರಿನ ಉಳ್ಳಾಲದಲ್ಲಿ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳು ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾರಾಟ ಮಾಡುತ್ತಿದ್ದರು.
"Drugs Free Mangaluru" ನಿಟ್ಟಿನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆ ಇದಾಗಿದೆ. ಆರೋಪಿಗಳು ಮಂಗಳೂರು ನಗರದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಬಂಧಿತರನ್ನು 29 ವರ್ಷದ ಜಾಕೀರ್, 27 ವರ್ಷದ ಕಾರ್ತಿಕ್ ಸುವರ್ಣ ಎಂದು ಗುರುತಿಸಲಾಗಿದೆ.
ಉಳ್ಳಾಲ ತಾಲೂಕಿನ ಉಳ್ಳಾಲಬೈಲ್ ಎಂಬಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿತ್ತು.
ಆರೋಪಿಗಳಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000 ಬೆಲೆ ಬಾಳುವ MDMA ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಎರಡು ಮೊಬೈಲ್, ನಗದು 3300/- ಮೌಲ್ಯದ ಡಿಜಿಟಲ್ ತೂಕ ಯಂತ್ರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸೊತ್ತಿನ ಒಟ್ಟು ಮೌಲ್ಯ ರೂ. 2,15,000 ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ದಂಧೆಯಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ನಡೆದಿದೆ. ಬಂಧಿತ ಜಾಕೀರ್ ಈ ಹಿಂದೆ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ.
ಉಳ್ಳಾಲ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದಲ್ಲಿ ಆರೋಪಿ. ಇನ್ನೊಬ್ಬ ಆರೋಪಿ ಕಾರ್ತಿಕ್ ಕೂಡ ಅಪರಾಧಿಕ ಹಿನ್ನೆಲೆ ಉಳ್ಳವ. ಈತ ಬಂದರು ಠಾಣೆಯಲ್ಲಿ ಬೈಕ್ ಕದ್ದ ಪ್ರಕರಣದ ಆರೋಪಿ.